ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀ ಎಂ. ಮಿಥುನ್ ಎಂ ರೈ ಇಂದು ದಿನಾಂಕ 10.04.2019 ರಂದು ಕಿನ್ನಿಗೋಳಿ ಪರಿಸರದಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರೊಂದಿಗೆ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್, ಶ್ರೀ ಅಮರನಾಥ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಧನಂಜಯ್ ಮಟ್ಟು, ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ್ ಕೋಟ್ಯಾನ್, ಎಪಿಎಂಸಿ ಆಧ್ಯಕ್ಷ ಪ್ರಮೋದ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ವಸಂತ್ ಬರ್ನಾಡ್ ಮೊದಲಾದವರು ಉಪಸ್ಥಿತರಿದ್ದರು.
