ಮಂಗಳೂರು: ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಶಿಬಿರ ಜುಲೈ 9 ರಂದು ಸಂಜೆ 4 ಗಂಟೆಗೆ ಕದ್ರಿ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜರಗಲಿದೆ. ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸುವಂತೆ ವಿನಂತಿಸಲಾಗಿದೆ.