ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರು ನಗರದ ಬಜಾಲ್ ಅಂಡರ್ ಪಾಸ್ ಬಳಿ ಇರುವ ವೀರನಗರ ಹಾಗೂ ಜಯನಗರಕ್ಕೆ ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು. ಸುಮಾರು 1.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಕಾಮಗಾರಿಯನ್ನು ಲ್ಯಾಂಡ್ ಆರ್ಮಿ ಸಂಸ್ಥೆಗೆ ವಹಿಸಲಾಗಿದೆ. ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಈ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಸದಸ್ಯರಾದ ಲ್ಯಾನ್ಸ್ ಲಾಟ್ ಪಿಂಟೋ, ಅಧಿಕಾರಿಗಳಾದ ಲಿಂಗೇ ಗೌಡ, ಯಶವಂತ, ಗಣಪತಿ ಹಾಗೂ ಅಶ್ರಫ್ ಬಜಾಲ್, ಸುಧೀರ್ ಟಿ.ಕೆ., ಕೃತಿನ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Image from post regarding ಬಜಾಲ್ ಅಂಡರ್ ಪಾಸ್ ಭೇಟಿ