ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ, 60 ನೇ ಬೆಂಗ್ರೆ ಕಾಂಗ್ರೆಸ್ ವಾರ್ಡ್ ಸಮಿತಿ ವತಿಯಿಂದ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಉಚಿತ ವೈದ್ಯಕೀಯ, ದಂತ ವೈದ್ಯಕೀಯ, ಮಲೇರಿಯಾ, ಮಹಿಳೆಯರಿಗಾಗಿ ಥೈರಾಯಿಡ್ ತಪಾಸಣಾ ಶಿಬಿರ ಜನವರಿ 29 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಸಬಾ ಬೆಂಗ್ರೆಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ರವರೆಗೆ ಜರಗಲಿದೆ.
ಈ ಶಿಬಿರದಲ್ಲಿ ಕಣ್ಣು, ಕಿವಿ, ಗಂಟಲು, ಮೂಳೆ, ಸ್ತ್ರೀ ರೋಗ, ಚರ್ಮ, ಸಾಮಾನ್ಯ ಕಾಯಿಲೆ ಮತ್ತು ಮಕ್ಕಳ ಅರೋಗ್ಯ ತಪಾಸಣೆಯನ್ನು ಮಾಡಲಾಗುತ್ತದೆ.ಈ ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಓದುವ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು. ಅಗತ್ಯವುಳ್ಳವರಿಗೆ ಔಷಧಿಯನ್ನು ಉಚಿತವಾಗಿ ನೀಡಲಾಗುವುದು.
ಕೆ ಎಂಸಿ ಆಸ್ಪತ್ರೆ, ಎ.ಜೆ.ಆಸ್ಪತ್ರೆ, ಫಾದರ್ ಮುಲ್ಲರ್ ಹೋಮಿಯೋಪತಿ ಕಾಲೇಜ್, ಕರ್ನಾಟಕ ಆಯುರ್ವೇದಿಕ ಕಾಲೇಜು, ಆಯುಷ್ ಇಲಾಖೆ, ಆಯುಷ್ ವೈದ್ಯಾಧಿಕಾರಿಗಳ ಸಂಘ, ಮಂಗಳೂರು ಮಹಾನಗರ ಪಾಲಿಕೆ ಮತ್ತು ನಗರ ಆರೋಗ್ಯ ಕೇಂದ್ರಗಳು ಭಾಗವಹಿಸುತ್ತವೆ.
ಸಾರ್ವಜನಿಕರು ಈ ಶಿಬಿರಕ್ಕೆ ಬಂದು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕಾಗಿ ಶಾಸಕ ಜೆ.ಆರ್.ಲೋಬೊ ವಿನಂತಿಸಿದ್ದಾರೆ.